Nandini Milk Price: ಏಪ್ರಿಲ್ 1ರಿಂದ ನಂದಿನಿ ಹಾಲು 4 ರೂಪಾಯಿ ಹೆಚ್ಚಳ, ಕಟ್ಟೆಯೊಡೆದ ಜನರ ಆಕ್ರೋಶ
8 months ago
68
ARTICLE AD
ರಾಜ್ಯ ಸರ್ಕಾರ ನಂದಿನಿ ಹಾಲಿನ ಬೆಲೆ ಏರಿಸಿ ಸಾರ್ವಜನಿಕರಿಗೆ ಶಾಕ್ ನೀಡಿದೆ. ಏಪ್ರಿಲ್ 1ರಿಂದ ನೂತನ ದರ ಜಾರಿಯಾಗಲಿದ್ದು ಇದರಂತೆ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂಪಾಯಿ ಹೆಚ್ಚಳವಾಗಲಿದೆ. ರೈತರಿಗೆ ಬೆಂಬಲ ಬೆಲೆ ನೀಡುವುದಕ್ಕಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಆದರೆ ಸರ್ಕಾರದ ಈ ನಿರ್ಧಾರದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.