ಬೆಳಗಾವಿಯಲ್ಲಿ ಮರಾಠಿಗರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಮರ ಸಾರಿದೆ. ಇತ್ತೀಚೆಗಷ್ಟೇ ಮರಾಠಿಗರು ಕರ್ನಾಟಕದ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮೇಲೆ ತೀವ್ರ ದೌರ್ಜನ್ಯ ಎಸಗಿದ್ದರು. ಇದನ್ನ ಖಂಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಇಂದು ಬೆಳಗಾವಿ ಚಲೋ ನಡೆಸಿದ್ದಾರೆ. ಅಲ್ಲದೆ ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಿ ಮರಾಠಿಗರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಕ್ಕೂ ಎಚ್ಚರಿಕೆ ನೀಡಿರುವ ಕರವೇಯ ನಾರಾಯಣಗೌಡ, ಹೋರಾಟ ತೀವ್ರಗೊಳಿಸುವುದಾಗಿ ಗುಡುಗಿದ್ದಾರೆ.