ARTICLE AD
ಬಜ್ಪೆಯಲ್ಲಿ ಇತ್ತೀಚೆಗೆ ಸಂಭವಿಸಿದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನ ಎನ್ಐಎ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಮಂಗಳೂರಿನ ಬಜ್ಪೆಯಲ್ಲಿ ಬೃಹತ್ ಜನಾಗ್ರಹ ಸಭೆ ನಡೆದಿದೆ. ಬಜ್ಪೆಯಲ್ಲಿ ಸೇರಿದ ನೂರಾರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ತನಿಖೆಯಲ್ಲಿ ತಮಗೆ ನಂಬಿಕೆ ಇಲ್ಲದಂತಾಗಿದ್ದು, ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಗಳನ್ನ ದಾಖಲಿಸಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
